ರಾಜ್ಯ

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ ನರೇಗಾ ಯೋಜನೆ ಉಳಿಸಿ ವಿಬಿ ಜಿ ರಾಮ್ ಜಿಯನ್ನು ವಿರೋಧಿಸಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿ ಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಶೇ.100ರಷ್ಟು ಕೂಲಿ ನೀಡಲಾಗುತ್ತಿದ್ದ ಮನರೇಗಾ ಯೋಜನೆಯ ಸ್ವರೂಪವನ್ನೇ ಬದಲಿಸಿ, ಅನೇಕ ಲೋಪದೋಷಗಳನ್ನು ಹೊಂದಿರುವ ಜಿ ರಾಮ್‌ಜಿ ತರಲು ಹೊರಟಿದ್ದಾರೆ.

ಅದರಲ್ಲೂ ಶೇ.60-40 ಸ್ಕೀಂ ತಂದಿರುವುದು ಶ್ರಮಿಕ ವಿರೋಧಿ ನೀತಿಯಾಗಿದೆ. ಬಿಜೆಪಿ-ಜೆಡಿಎಸ್ ಸಂಸದರಿದ್ದಾರೆ. ಅವರಿಗೆ ನಾಚಿಕೆಯಾಗಬೇಕು. ಎಂಪಿಗಳು, ಮಂತ್ರಿಗಳು ತಮಿಳುನಾಡು ಸರ್ಕಾರಕ್ಕೆ ಕೊಡುವ ಸಪೋರ್ಟ್ನ್ನೂ ಕರ್ನಾಟಕ ರಾಜ್ಯಕ್ಕೆ ನೀಡುತ್ತಿಲ್ಲ ಎಂದರೆ ಅವರದು ಒಂದೇ ಅಜೆಂಡಾ, ನರೇಗಾ ವಿರೋಧ ಮಾಡಬೇಕಷ್ಟೆ. ಅದಕ್ಕಾಗೇ ಬಿಜೆಪಿಯವರು ಸದನದಲ್ಲಿ ಭಾಗವಹಿಸಿದಂತೆಯೂ ಆಗಬೇಕು, ನರೇಗಾ ಚರ್ಚೆಯಲ್ಲಿ ಭಾಗವಹಿಸಿದಂತೆಯೂ ಆಗಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದಾರೆ.

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ವಿಚಾರದ ಬಗ್ಗೆ ಚರ್ಚಿಸಲಾಗಿದೆ. ಅವರು ಬ್ಯುಸಿನೆಸ್ ಅಡ್ವೆಸರಿ ಕಮಿಟಿ ಸಭೆಯಲ್ಲಿ ಕುಳಿತು ಚರ್ಚಿಸಲಾಗಿದೆ. ಇಷ್ಟಾದರೂ ಮನ್ರೇಗಾ ಬಗ್ಗೆ ಎರಡು ದಿನ ಚರ್ಚಿಸಲು ಸರ್ಕಾರ ತಯಾರಿದೆ ಎಂದು ತಿಳಿಸಿದ್ದೇವೆ. ಆದರೆ ಬಿಜೆಪಿ ಜೆಡಿಎಸ್‌ನವರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತ ರಾಜ್ಯದ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಇದು ದುರದೃಷ್ಟಕರ ಬೆಳವಳಿಗೆ ಎಂದು ಹರಿಹಾಯ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

2 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

7 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

7 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

7 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

7 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

7 hours ago