ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು. ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆ ಸಮೀಕ್ಷೆಗಳೆಲ್ಲವೂ ಸುಳ್ಳಾಗುತ್ತವಾ ಎಂಬ ಅನುಮಾನ ಶುರುವಾಗಿದೆ.
ಚುನಾವಣೆ ಎಕ್ಸಿಟ್ ಪೋಲ್ ಬಂದಾಗಿದಂಲೂ ಕಾಂಗ್ರೆಸ್ ನಾಯಕರು ನಾವು ಸಮೀಕ್ಷೆಗಳನ್ನು ನಂಬೋಂದಿಲ್ಲ. ನೋಡ್ತಾ ಇರಿ ಫಲಿತಾಂಶ ಬೇರೆ ರೀತಿಯಲ್ಲಿಯೇ ಇರುತ್ತದೆ ಎಂದು ಹೇಳಿದ್ದರು. ಸದ್ಯ ಪರಿಸ್ಥಿತಿ ನೋಡಿದರೆ ಕಾಂಗ್ರೆಸ್ ನಾಯಕರ ಹೇಳಿಕೆಯಂತೆಯೇ ಇವೆ. ಆದರೆ ಇದೇ ಟ್ರೆಂಡ್ ಮುಂದುವರಿಯುತ್ತಾ ಅಥವಾ ಹಿನ್ನಡೆ ಸಾಧಿಸುತ್ತಾ ಎಂದು ಹೇಳಲು ಸಾಧ್ಯವಿಲ್ಲ.
ಎನ್‌ಡಿಎ 290 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…