Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಹುಲಿಗಳ ಅಸಹಜ ಸಾವು ಪ್ರಕರಣ: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

Unnatural Deaths of 4 Tigers: Minister Eshwar Khandre Orders Investigation

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಳ್ಳಬೇಕು. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

Tags:
error: Content is protected !!