ರಾಜ್ಯ

ಅಸಹಜ ಲೈಂಗಿಕ ಪ್ರಕರಣ: ಸೂರಜ್‌ ರೇವಣ್ಣ ಕಸ್ಟಡಿ ವಿಸ್ತರಣೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣನನ್ನು ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸೂರಜ್‌ ರೇವಣ್ಣ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು(ಜು.1) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ದಾಖಲಾದ ಪ್ರಕರಣದಲ್ಲಿ ಜೂನ್‌22ರಂದು ಸೂರಜ್‌ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಅವರ ಕಸ್ಟಡಿ ಅಂತ್ಯವಾದ ಹಿನ್ನೆಲೆ, ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

ಸೂರಜ್‌ ರೇವಣ್ಣರನ್ನು ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ವಾಯ್ಸ್ ಸ್ಯಾಂಪಲ್ಸ್ ಸಂಗ್ರಹ ಮಾಡಬೇಕಿದೆ, ಪ್ರತಿನಿತ್ಯ ಏನೆಲ್ಲಾ ತನಿಖೆ ನಡೆದಿದೆ, ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಎಂಟು ದಿನ ಕಸ್ಟಡಿಯಲ್ಲಿದ್ದಾಗ ಏನಾದೂ ತೊಂದರೆ ನೀಡಿದರಾ ಎಂದು ಸೂರಜ್‌ಗೆ ಜಡ್ಜ್ ಪ್ರಶ್ನೆ ಕೇಳಿದರು. ಯಾವುದೇ ತೊಂದರೆ ನೀಡಿಲ್ಲ ಎಂದು ಸೂರಜ್ ಉತ್ತರಿಸಿದ್ದಾರೆ. ಬಳಿಕ 2 ದಿನ ಕಸ್ಟಡಿ ವಿಸ್ತರಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

48 mins ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

2 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

3 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

3 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

3 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

4 hours ago