ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್.14ರವರೆಗೂ ರಾಜ್ಯದಲ್ಲಿ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.14ರವರೆಗೂ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.