ರಾಜ್ಯ

800 ಸರ್ಕಾರಿ ಶಾಲೆಗಳ ಉನ್ನತೀಕರಣ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯಾದ್ಯಂತ 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, 400 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಈ ಕುರಿತು ಮಾತನಾಡಿದ ಅವರು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು. ಏಷ್ಯಾ ಅಭಿವೃದ್ಧಿ ಬ್ಯಾಂಕ್‍ನ ಸಹಯೋಗದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. ಗಣಿ ಪರಿಸರ ಪುನಶ್ಚೇತನ ನಿಗಮದ ವತಿಯಿಂದ 10 ತಾಲ್ಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಿ ಪ್ರತ್ಯೇಕ ಡಿಪಿಎಆರ್ ತಯಾರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2ರಿಂದ 3 ಕೆಪಿಎಸ್ ಶಾಲೆಗಳು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿ ತಾಲ್ಲೂಕಿನಲ್ಲಿ 4ರಿಂದ 5 ಶಾಲೆಗಳನ್ನು ಉನ್ನತೀಕರಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿ: SSLC : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಇನ್ಮುಂದೆ ಶೇ.33 ಅಂಕ ಪಡೆದರೆ ಪಾಸ್‌

ಸಮೀಕ್ಷೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದಾರೆ. ಅವರಿಗೆಲ್ಲಾ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದ ಅವರು, ನಿನ್ನೆಯವರೆಗೆ ಜಿಬಿಎ ಹೊರತುಪಡಿಸಿ ಶೇ.91.46ರಷ್ಟು ಪ್ರಗತಿ ಸಾಧಿಸಲಾಗಿದೆ,.ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಸಾಕಷ್ಟು ಶಿಕ್ಷಕರಿಗೆ ಸಾರ್ವಜನಿಕರು ತೊಂದರೆ ಕೊಟ್ಟಿದ್ದಾರೆ. ಆದರೂ ಕೂಡ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಪಾಠ ಮಾಡುತ್ತಾರೆ. ಹೀಗಾಗಿ ಮಕ್ಕಳಿಗೆ ಪಾಠದ ವಿಚಾರದಲ್ಲಿ ತೊಂದರೆ ಆಗುವುದಿಲ್ಲ.ಬೆಂಗಳೂರಿನಲ್ಲೂ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸುವ ವಿಶ್ವಾಸವಿದೆ. ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ, ಒತ್ತಡದ ಮಧ್ಯೆಯೂ ಶಿಕ್ಷಕರು ತುಂಬ ಪ್ರಾಮಾಣಿಕವಾಗಿ ಸಮೀಕ್ಷೆ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾಷಾ ಆಯ್ಕೆಯ ಸೌಲಭ್ಯ!
ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯೆಂದರೆ ಭಾಷಾ ಆಯ್ಕೆಯ ಸೌಲಭ್ಯ. 2025-26ರ ಶೈಕ್ಷಣಿಕ ಸಾಲಿನಿಂದ ಐದನೇ ತರಗತಿವರೆಗೆ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಲಾಗುವುದು. ಈ ಪದ್ಧತಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಲಿಕೆಯ ಮಾಧ್ಯಮವಾಗಿ ಬಳಸಲಾಗುತ್ತದೆ. ಆದರೆ, ಐದನೇ ತರಗತಿಯ ನಂತರ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ತಮಗೆ ಬೇಕಾದ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಅಂದರೆ, ಕನ್ನಡ ಮಾಧ್ಯಮದಲ್ಲಿ ಓದುವುದಾದರೂ, ಇಂಗ್ಲಿಷ್ ಮಾಧ್ಯಮದಲ್ಲಿ ಓದುವುದಾದರೂ, ಆಯ್ಕೆಯ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನೀಡಲಾಗಿದೆ.

ಭಾಷಾ ಆಯ್ಕೆಯ ನಿಯಮವು ಶಿಕ್ಷಣವನ್ನು ಹೆಚ್ಚು ಸುಲಭ ಮತ್ತು ಸೌಕರ್ಯಯುತವಾಗಿಸುವ ಗುರಿಯನ್ನು ಹೊಂದಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯ ಉಳಿವಿಗೆ ಮತ್ತು ಪ್ರಚಾರಕ್ಕೆ ಒತ್ತು ನೀಡುವುದರ ಜೊತೆಗೆ, ಇಂಗ್ಲಿಷ್ ಮಾಧ್ಯಮದ ಮೂಲಕ ಜಾಗತಿಕ ಸ್ಪರ್ಧೆಗೆ ಸಿದ್ಧರಾಗುವ ಅವಕಾಶವನ್ನೂ ಸರ್ಕಾರ ಒದಗಿಸುತ್ತಿದೆ. ಈ ದ್ವಿಭಾಷಾ ಪದ್ಧತಿಯಿಂದ ಮಕ್ಕಳು ಎರಡೂ ಭಾಷೆಗಳಲ್ಲಿ ಪರಿಣಿತರಾಗಬಹುದು. ಐದನೇ ತರಗತಿಯ ನಂತರ ಭಾಷೆಯ ಆಯ್ಕೆಯ ಸ್ವಾತಂತ್ರ್ಯವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಸಾಮಥ್ರ್ಯಕ್ಕೆ ತಕ್ಕಂತೆ ಶಿಕ್ಷಣ ಪಡೆಯಲು ಸಹಾಯ ಮಾಡುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

33 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

35 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

37 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

39 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

45 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

51 mins ago