Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

UPSC ಪರೀಕ್ಷೆ ದಿನವೇ PSI ಪರೀಕ್ಷೆ: ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ

ಬೆಂಗಳೂರು: ಇದೇ ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರಕ್ಕೆ ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲ. ಯುಪಿಎಸ್‌ಸಿ ಪರೀಕ್ಷೆ ನಡೆಯುವ ದಿನದಂದೇ ಪಿಎಸ್‌ಐ ಪರೀಕ್ಷೆ ದಿನಾಂಕ ನಿಗದಿ ಮಾಡಿದ್ದಾರೆ. ಈ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದ್ದಾರೆ ಎಂದು ಕಿಡಿಕಾರಿದೆ.

ಯುಪಿಎಸ್‌ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್.‌16ರಂದು ಯುಪಿಎಸ್‌ಸಿ ಪ್ರಿಲಿಮ್ಸ್‌ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್.‌22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ.

ವಿವೇಚನೆ ಇಲ್ಲದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌22ರಂದೇ ನಡೆಸುವುದಾಗಿ ಪ್ರಕಟಿಸಿದೆ.

ಈ ಮೂಲಕ ರಾಜ್ಯ ಸರ್ಕಾರ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿ ಇಡುವ ಕೆಲಸ ಮಾಡಿದೆ ಎಂದು ಕಿಡಿಕಾರಿದೆ.

ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಿಎಸ್‌ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಬಿಜೆಪಿ ಆಗ್ರಹಿಸಿದೆ.

 

 

Tags:
error: Content is protected !!