ಬೆಂಗಳೂರು: ಇದೇ ಸೆಪ್ಟೆಂಬರ್.22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲ. ಯುಪಿಎಸ್‌ಸಿ ಪರೀಕ್ಷೆ ನಡೆಯುವ ದಿನದಂದೇ ಪಿಎಸ್‌ಐ ಪರೀಕ್ಷೆ ದಿನಾಂಕ ನಿಗದಿ ಮಾಡಿದ್ದಾರೆ. ಈ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದ್ದಾರೆ ಎಂದು ಕಿಡಿಕಾರಿದೆ.
ಯುಪಿಎಸ್‌ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್.16ರಂದು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್.22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ.
ವಿವೇಚನೆ ಇಲ್ಲದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರಂದೇ ನಡೆಸುವುದಾಗಿ ಪ್ರಕಟಿಸಿದೆ.
ಈ ಮೂಲಕ ರಾಜ್ಯ ಸರ್ಕಾರ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿ ಇಡುವ ಕೆಲಸ ಮಾಡಿದೆ ಎಂದು ಕಿಡಿಕಾರಿದೆ.
ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಿಎಸ್‌ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ಬಿಜೆಪಿ ಆಗ್ರಹಿಸಿದೆ.
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…