Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

UPSC ಫಲಿತಾಂಶ ಪ್ರಕಟ: ಮಂಡ್ಯ ಹೈದನದು 731 ರ್ಯಾಂಕ್‌!

ನವದೆಹಲಿ: 2023 ರ ಸೆಪ್ಟೆಂಬರ್ 15 ರಿಂದ 24 ವರೆಗೆ ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ್ದ ನಾಗರೀಕ ಸೇವೆಗಳ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು (ಮಂಗಳವಾರ, ಏ.೧೬) ಪ್ರಕಟಿಸಿದೆ.

ಈ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಿರೋಟ ಗ್ರಾಮದ ಚಂದನ್‌ ಬಿಎಸ್‌ ಅವರು 731 ರ್ಯಾಂಕ್‌ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಪರೀಕ್ಷೆಯಲ್ಲಿ ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ದೇಶಕ್ಕೆ ಮೊದಲನೇ ರ್ಯಾಂಕ್‌ ಪಡೆದು ತೇರ್ಗಡೆಹೊಂದಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅನಿಮೇಶ್‌ ಪ್ರಧಾನ್‌ ಹಾಗೂ ತೃತೀಯ ಸ್ಥಾನದಲ್ಲಿ ಡೋಣೂರು ಅನನ್ಯಾ ರೆಡ್ಡಿ ಅವರು ಕಾಣಿಸಿಕೊಂಡಿದ್ದಾರೆ.

ಒಟ್ಟು 1.016 ಮಂದಿ ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರನ್ನು ವಿವಿಧ ಕೇಂದ್ರದ ಸೇವೆಗಳಿಗೆ ನೇಮಿಸಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಫಲಿತಾಂಶವನ್ನು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

2023 ರ ಸೆಪ್ಟೆಂಬರ್ ನಲ್ಲಿ ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್‌ ಸೇವೆ ಹಾಗೂ ಎ ಮತ್ತು ಬಿ ವೃಂದದ ಕೇಂದ್ರ ಸೇವೆಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲು ಸಾಮಾನ್ಯ ವರ್ಗದಿಂದ 347, ಆರ್ಥಿಕವಾಗಿ ದುರ್ಬಲ ವರ್ಗ 115, ಹಿಂದುಳಿದ ವರ್ಗ 303, ಪರಿಶಿಷ್ಟ ಜಾತಿ 165, ಪರಿಶಿಷ್ಟ ಪಂಗಡ 86 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

Tags: