ರಾಜ್ಯ

ಯೂರಿಯಾ ಪೂರೈಕೆ ಕಡಿತ ; ಸಾವಯುವ ಕೃಷಿಯ ಬಗ್ಗೆ ಅರಿವು ಮೂಡಿಸಲಾಗುವುದು : ಸಚಿವ ಚಲುವರಾಯಸ್ವಾಮಿ

ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಅವರು ಸುದ್ದಿ ಗೋಷ್ಟಿ ಯಲ್ಲಿ ಈ ವಿಷಯ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವ ಉದ್ದೇಶದಿಂದ ಯೂರಿಯಾ ಬಳಕೆ‌ ಕಡೆಮೆ ಮಾಡಲು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಎರೆಡು ವರ್ಷಗಳಿಂದ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಬಳಕೆ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಾವಯವ ಕೃಷಿ, ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಜ್ಯಾದ್ಯಂತ ಮಳೆ ಉತ್ತಮವಾಗಿದ್ದು ಬಿತ್ತನೆ ಚುರುಕುಗೊಂಡಿದೆ. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಮಾಡಿದೆ. ರೈತರು ಪ್ರತಿ ವರ್ಷ ಬೆಳೆವಿಮೆ ಮಾಡಿಸಿ ಸಂಭವನೀಯ ನಷ್ಟ ಕಡಿತ ಮಾಡಿಕೊಳ್ಳಬೇಕು ಎಂದು ಕೃಷಿ ‌ಸಚಿವರು ಕರೆ ನೀಡಿದರು.

2023-24 ರಲ್ಲಿ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ 3454 ಕೋಟಿ ರೂ ಬರಪರಿಹಾರ ನೀಡಲಾಗಿತ್ತು. 2024 -25 ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು .ಈ ವರ್ಷ148.48 ಲಕ್ಷ ಮೆ.ಟನ್ ಆಹಾರ ಧಾನ್ಯ ಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆಧ್ಯತೆ ನೀಡಲಾಗಿದೆ.

ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು, ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೃಷಿ ಭಾಗ್ಯ ಯೋಜನೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಲಾಗಿದ್ದು 24000 ಕೃಷಿ ಹೊಂಡ ನಿರ್ಮಾಣ ಗುರಿ ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ಮಾಡಿ ಸಲಹೆ ,ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ ಜಿ.ಟಿ ಪುತ್ರ,ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರ್ವೇಜ್ ಬಂಥನಾಳ,ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್,ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸದಾನಂದ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

10 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

10 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

10 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

10 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

10 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

10 hours ago