ಬೆಂಗಳೂರು : ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಧಾನಪರಿಷತ್‍ನಲ್ಲಿ ತಿಳಿಸಿದ್ದಾರೆ.
ಸದಸ್ಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 950 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 450 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉಳಿದಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ತಿಳಿಸಿದರು.
ಇಲಾಖೆಯಲ್ಲಿ ಒಟ್ಟು 1450 ಹುದ್ದೆಗಳಿವೆ. ಇದರಲ್ಲಿ 750 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು ಉಳಿದವುಗಳನ್ನು ಕಾಲಮಿತಿಯೊಳಗೆ ತುಂಬಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡಿದ ಸದಸ್ಯ ಹನುಮಂತ ನಿರಾಣಿಯವರು, ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಡೀ ರಾಜ್ಯದಲ್ಲಿ ಒಂದೇ ತೋಟಗಾರಿಕೆ ವಿವಿಯಲ್ಲಿ 360 ಬೆಳೆಗಳನ್ನು ಬೆಳೆಯಲಾಗುತ್ತಿದೆ. ಸಂಶೋಧನೆ ಅಗತ್ಯವಿದೆ ಎಂದು ಮನವಿ ಮಾಡಿದರು.





