Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್‌ ಸಲ್ಯೂಷನ್ ಗ್ಲುಕೋಸ್‌ ಬಳಕೆ ನಿಷೇಧ

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್‌ ಸಲ್ಯೂಷನ್ ಗ್ಲುಕೋಸ್‌ ಬಳಕೆಗೆ ತಡೆ ನೀಡಲಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ಬಾಣಂತಿಯರ ಸಾವಿಗೆ ರಿಂಗರ್‌ ಲ್ಯಾಕ್ವೇಟ್‌ ಸಲ್ಯುಷನ್‌ ಬಳಕೆ ಕಾರಣ ಎಂದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್‌ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು.

ಈ ವಾರದಲ್ಲಿ ಪರೀಕ್ಷೆ ವರದಿ ಬರಲಿದೆ. ನಂತರದಲ್ಲಿ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತಾ ಕ್ರಮವಾಗಿ ಐವಿ ರಿಂಗರ್‌ ಲ್ಯಾಕ್ವೇಟ್‌ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

 

Tags: