ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ವೇಟ್ ಸಲ್ಯುಷನ್ ಬಳಕೆ ಕಾರಣ ಎಂದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್‌ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು.
ಈ ವಾರದಲ್ಲಿ ಪರೀಕ್ಷೆ ವರದಿ ಬರಲಿದೆ. ನಂತರದಲ್ಲಿ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತಾ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ವೇಟ್ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…