Mysore
16
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮುಜರಾಯಿ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ತಿರುಪತಿ ಲಡ್ಡು ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಹೊತ್ತಲ್ಲೇ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳ ಇಲಾಖೆಯು ಇಂದು ಆದೇಶವನ್ನು ಹೊರಡಿಸಿದ್ದು, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿನ ಸೇವೆಗಳು, ದೀಪಗಳು ಸೇರಿದಂತೆ ಎಲ್ಲಾ ವಿಧಧ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.

ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.

Tags:
error: Content is protected !!