Mysore
29
few clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಎಂದಿಗೂ ಕಾಂಗ್ರೆಸ್‌ ಸೇರಲ್ಲ ಎಂದ ವಿ.ಸೋಮಣ್ಣ: ಸಿಎಂ ಬಗ್ಗೆ ಶ್ಲಾಘನೆ.!

ಬೆಂಗಳೂರು : ಮಾಜಿ ಸಚಿವ ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದು, ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್‌ ಸೇರು ವಿಚಾರವನ್ನು ಗರುವಾರ ತಳ್ಳಿಹಾಕಿದ್ದಾರೆ.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆ ಸೇರಿದಂತೆ ಬೇರೆ ಯಾವುದೇ ಚುನವಾಣೆಯಲ್ಲಿ ಸ್ಪರ್ಧಿಸುವ ಇಂಗಿತ ನನಗಿಲ್ಲ ಎಂದು ತಿಳಿಸಿದರು.

15 ಸಾವಿರಕ್ಕೂ ಹೆಚ್ಚಿನ ಮಕ್ಕಳ ಶಿಕ್ಷಣಕ್ಕೆ ಕಾರಣವಾಗಿರುವ ಸಿದ್ದಗಂಗಾ ಮಠದ ಯಶಸ್ಸು ಗುರಿತುಸಲು ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದೇನೆ. ಈ ಕಾರ್ಯಕ್ರಮದ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದಿಲ್ಲ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.

ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅಥವಾ ಇತರ ಕಾಂಗ್ರೆಸ್ ಮುಖಂಡರನ್ನು ಆಹ್ವಾನಿಸಿದರೆ, ತಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರ್ಥವಲ್ಲ. ಬಿಜೆಪಿಯ ತುಮಕೂರು ಸಂಸದ ಜಿಎಸ್ ಬಸವರಾಜು ಮತ್ತು ಶಾಸಕರಾದ ಜ್ಯೋತಿ ಗಣೇಶ್ ಮತ್ತು ಸುರೇಶ್ ಗೌಡ ಅವರನ್ನೂ ಆಹ್ವಾನಿಸಿದ್ದೇನೆ ಎಂದು ಅವರು ವಿವರಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!