ಬೆಂಗಳೂರು : ಮಾಜಿ ಸಚಿವ ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದು, ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರು ವಿಚಾರವನ್ನು ಗರುವಾರ ತಳ್ಳಿಹಾಕಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆ ಸೇರಿದಂತೆ ಬೇರೆ ಯಾವುದೇ ಚುನವಾಣೆಯಲ್ಲಿ ಸ್ಪರ್ಧಿಸುವ ಇಂಗಿತ ನನಗಿಲ್ಲ ಎಂದು ತಿಳಿಸಿದರು.
15 ಸಾವಿರಕ್ಕೂ ಹೆಚ್ಚಿನ ಮಕ್ಕಳ ಶಿಕ್ಷಣಕ್ಕೆ ಕಾರಣವಾಗಿರುವ ಸಿದ್ದಗಂಗಾ ಮಠದ ಯಶಸ್ಸು ಗುರಿತುಸಲು ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದೇನೆ. ಈ ಕಾರ್ಯಕ್ರಮದ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಿಲ್ಲ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.
ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅಥವಾ ಇತರ ಕಾಂಗ್ರೆಸ್ ಮುಖಂಡರನ್ನು ಆಹ್ವಾನಿಸಿದರೆ, ತಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರ್ಥವಲ್ಲ. ಬಿಜೆಪಿಯ ತುಮಕೂರು ಸಂಸದ ಜಿಎಸ್ ಬಸವರಾಜು ಮತ್ತು ಶಾಸಕರಾದ ಜ್ಯೋತಿ ಗಣೇಶ್ ಮತ್ತು ಸುರೇಶ್ ಗೌಡ ಅವರನ್ನೂ ಆಹ್ವಾನಿಸಿದ್ದೇನೆ ಎಂದು ಅವರು ವಿವರಿಸಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…