ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಸಿಕೊಳ್ಳಲು ಜಾತಿ ಗಣತಿ ವರದಿ ಮಂಡಿಸುವ ಮೂಲಕ ಮತ್ತೊಂದು ದಾಳ ಪ್ರಯೋಗ ಮಾಡುತ್ತಿರುವ ನಡೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಈ ರಾಜ್ಯದ ಮುಖ್ಯಮಂತ್ರಿ ಎಂದೆನ್ನಿಸುತ್ತಿಲ್ಲ. ಏಕೆಂದರೆ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ಜಾತಿ ಗಣತಿ ವರದಿಯ ದಾಳನ್ನು ಪ್ರಯೋಗಿಸುವ ಮೂಲಕ ಜನರ ಮೇಲೆ ಗದಾಪ್ರಹಾರ ನಡೆಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಜಾತಿ ಗಣತಿ ವರದಿ ವಿಚಾರದಲ್ಲಿ ಕಾಂಗ್ರೆಸ್‌ನಲ್ಲೇ ಒಗ್ಗಟ್ಟಿಲ್ಲ. ಅವರ ಪಕ್ಷದಲ್ಲಿಯೇ ಸಾಧಕ-ಬಾಧಕ ಏನಾಗುತ್ತದೆಂಬ ಎನ್ನುವುದರ ಬಗ್ಗೆ ಅರಿವಿಲ್ಲ. ಸಿದ್ದರಾಮಯ್ಯ ಅವರು ರಾಜ್ಯದ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಈ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕಿಡಿಕಾರಿದರು.





