ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಿಎಂ ಆದರೆ ಸಂತೋಷ ಆಗುತ್ತದೆ ಎಂದಿದ್ದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದರೇ ಖುಷಿ ಪಡುತ್ತೇನೆ ಎಂದು ನಾನು ಹೇಳಿಲ್ಲ ಎಂದು ಕೇಂದ್ರ ಸಚಿವ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೇ ನಾನು ಖುಷಿ ಪಡುತ್ತೇನೆ ಎಂದು ಹೇಳಿದ್ದೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಮುಂದುವರಿದರೇ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎಂದು ನಾನು ಹೇಳಿಲ್ಲ ಎಂದು ವಾದಿಸಿದರು.
ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಕಾನೂನಿನಡಿಯಲ್ಲಿಯೇ ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಕಾನೂನಿನಂತೆ ಸಿದ್ದರಾಮಯ್ಯ ಅವರು ನಡೆದುಕೊಂಡರೇ ಅವರ ಗೌರವ ಹೆಚ್ಚಾಗುತ್ತದೆ. ಅವರ ರಾಜೀನಾಮೆ ಬಗ್ಗೆ ಸ್ವತಃ ಅವರ ಪಕ್ಷವೇ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.





