ಬೆಂಗಳೂರು: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ.
ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…