Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಕನ್ನಡ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರ ಬಗ್ಗೆ ಯಾವುದೇ ವಿಚಾರಗಳಿದ್ದರೂ ಅದಕ್ಕೆ ನಮ ಸರ್ಕಾರ ತಕ್ಷಣ ಸ್ಪಂದಿಸಲಿದೆ ಎಂದರು.

ಇದನ್ನೂ ಓದಿ:-2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕುಂಟುತ್ತಾ ಸಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಅದನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಬೆಂಗಳೂರಿನ ನಮ್ಮ ಮೆಟ್ರೊಗೆ ಬಸವಣ್ಣ ಅವರ ಹೆಸರನ್ನು ನಾಮಕರಣ ಮಾಡಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದು ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆ. ನಮ್ಮ ಪಾಲು ಶೇ.87ರಷ್ಟಿದೆ, ಕೇಂದ್ರ ಸರ್ಕಾರದ ಪಾಲು ಶೇ.13 ರಷ್ಟಿದೆ. ನಮ್ಮ ಪಾಲು ಹೆಚ್ಚಿದ್ದರೂ, ಯಾವುದೇ ನಿರ್ಣಯ ತೆಗೆದುಕೊಳ್ಳಬೇಕಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯ. ಪೂರ್ಣ ಪ್ರಮಾಣದಲ್ಲಿ ನಮ್ಮದೇ ಯೋಜನೆಯಾಗಿದ್ದರೆ ಈ ಕ್ಷಣವೇ ನಾನು ಘೋಷಣೆ ಮಾಡುತ್ತಿದ್ದೆ. ಈಗ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Tags:
error: Content is protected !!