ರಾಜ್ಯ

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ , ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.   ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ

ಮಾರ್ಚ್ 18,  1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು.

ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳು

ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…

9 mins ago

ಮರ ಕಡಿಯದೆಯೇ ಕಾಗದ ತಯಾರಿಸುವ ಪೇಪರ್‌ ಪವಾರ್‌

ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…

33 mins ago

ಲಿಫ್ಟ್‌ನಲ್ಲಿ ಸಿಲುಕಿಕೊಂಡ ಕನ್ನಡದ ಲೇಖಕಿ

ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…

45 mins ago

ಹಳೆಯ ಪುಸ್ತಕಗಳ ನಡುವೆ ನಗುವ ಆನಂದರಾಯರು

ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…

53 mins ago

ಓದುಗರ ಪತ್ರ | ರೇಣುಕಾ ಇತರರಿಗೆ ಮಾದರಿ

ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…

2 hours ago

ನುಡಿ ಜಾತ್ರೆಗೆ ದಿಢೀರ ಮಳೆ ಸಿಂಚನ

ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…

3 hours ago