Mysore
20
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.

ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ. ಅಪಾರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ.

ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.

Tags:
error: Content is protected !!