ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲುತೂರಾಟ ನಡೆದಿದೆ.
ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬಿಗುುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿದ್ದಾರೆ. ಇದೀಗ ಬಿಜೆಪಿ ಮುಖಂಡರು ಸೇರಿದಂತೆ ಕಾರ್ಯಕರ್ತರು ಜಮಾಯಿಸಿದ್ದಾರೆ.
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ಬ್ಯಾನರ್ ಅಳವಡಿಸಿದ್ದಾರೆ. ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಜನಾರ್ಧನ ರೆಡ್ಡಿ ಬೆಂಬಲಿಗರು ವಿರೋಧಿಸಿದ್ದಾರೆ. ಎರಡು ಗುಂಪುಗಳ ನಡುವೆ ಗಲಾಟೆ ಜೋರಾಗಿ ಕಲ್ಲುತೂರಾಟ ನಡೆದಿದೆ. ಇದೇ ವೇಳೆ ಮಧ್ಯಪ್ರವೇಶಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಬಳ್ಳಾರಿ ನಗರದ ಅವಂಬಾವಿ ಏರಿಯಾ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.
ಗಾಳಿಯಲ್ಲಿ ಗುಂಡೂ
ಪರಿಸ್ಥಿತಿ ಬಿಗುಡಾಯಿಸಿದ್ದು, ಗನ್‌ಮ್ಯಾನ್ ಗಾಳಿಯಲ್ಲಿ ತುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಣಾಮ ಓರ್ವ ಕಾರ್ಯಕರ್ತನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.





