ರಾಜ್ಯ

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲುತೂರಾಟ ನಡೆದಿದೆ.

ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬಿಗುುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿದ್ದಾರೆ. ಇದೀಗ ಬಿಜೆಪಿ ಮುಖಂಡರು ಸೇರಿದಂತೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ಬ್ಯಾನರ್ ಅಳವಡಿಸಿದ್ದಾರೆ. ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಜನಾರ್ಧನ ರೆಡ್ಡಿ ಬೆಂಬಲಿಗರು ವಿರೋಧಿಸಿದ್ದಾರೆ. ಎರಡು ಗುಂಪುಗಳ ನಡುವೆ ಗಲಾಟೆ ಜೋರಾಗಿ ಕಲ್ಲುತೂರಾಟ ನಡೆದಿದೆ. ಇದೇ ವೇಳೆ ಮಧ್ಯಪ್ರವೇಶಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಬಳ್ಳಾರಿ ನಗರದ ಅವಂಬಾವಿ ಏರಿಯಾ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

ಗಾಳಿಯಲ್ಲಿ ಗುಂಡೂ
ಪರಿಸ್ಥಿತಿ ಬಿಗುಡಾಯಿಸಿದ್ದು, ಗನ್‌ಮ್ಯಾನ್‌ ಗಾಳಿಯಲ್ಲಿ ತುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಣಾಮ ಓರ್ವ ಕಾರ್ಯಕರ್ತನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇ ಸಂಚಿಕೆ

ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…

31 mins ago

ಗಾಯಕಿ ಮಂಗ್ಲಿಯಿಂದ ೧೦ ಕೋಟಿ ವಂಚನೆ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…

57 mins ago

ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮಳೆ, ಕರಾವಳಿಯಲ್ಲಿ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…

1 hour ago

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…

2 hours ago

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

2 hours ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

2 hours ago