Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ವಾಲ್ಮೀಕಿ ನಿಗಮ ಹಗರಣದಲ್ಲಿ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಕಿಡಿಕಾರಿದರು.

ವಾಲ್ಮೀಕಿ ನಿಗಮದಲ್ಲಿ ಎಸ್ಸಿ, ಎಸ್ಟಿ ವರ್ಗಗಳ ಹಣ ಲೂಟಿ ಮಾಡಲಾಗಿದ್ದು ಅವರ ಸಂಪುಟ ಸಚಿವರೇ ರಾಜೀನಾಮೆ ಕೊಟ್ಟಿದ್ದಾರೆ. ಅಕ್ರಮ ನಡೆದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಎಸ್ಸಿ, ಎಸ್ಟಿ ವರ್ಗಗಳಿಗೆ ಅನ್ಯಾಯ ಆಗಿದೆ. ಈ ಹಣದ ದರೋಡೆಗೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ಬ್ಯಾಂಕ್‌ಗಳ ಅಧಿಕಾರಿಗಳು ಈ ಪ್ರಕರಣದಲ್ಲಿ ತಪ್ಪು ಮಾಡಿದ್ದರೆ ಕ್ರಮ ಆಗಲಿ. ಈಗಾಗಲೇ ಅಧಿಕಾರಿಗಳ ಮೇಲೆ ತನಿಖೆ ನಡೆಯುತ್ತಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಿಡಿಕಾರಿದರು.

ವಾಲ್ಮೀಕಿ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ. ವಾಲ್ಮೀಕಿ ಹಗರಣದಿಂದ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Tags: