ಬೆಂಗಳೂರು: ಜೈಲಿನಿಂದ ಬಿಡುಗಡೆ ಆದ ಬಳಿಕವೇ ಮಾಜಿ ಸಚಿವ ಬಿ.ನಾಗೇಂದ್ರ ಅವರು, ಬಿಗ್ ಬಾಂಬ್ ಸಿಡಿಸಿದ್ದಾರೆ.
ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಬಿ.ನಾಗೇಂದ್ರ ಅವರು, ನಾನು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿದ್ದರೂ ನನ್ನನ್ನು ಬಂಧಿಸಿ ಇ.ಡಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ.
ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರೇಳುವಂತೆ ಕಿರುಕುಳ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಇ.ಡಿ ಅಧಿಕಾರಿಗಳು ಕಳೆದ ಮೂರು ತಿಂಗಳಿನಿಂದಲೂ ನನಗೆ ತುಂಬಾ ಹಿಂಸೆ ನೀಡಿದ್ದಾರೆ. ಇದಕ್ಕೆಲ್ಲಾ ಬಿಜೆಪಿ ಹಿರಿಯ ನಾಯಕರೇ ಕಾರಣ ಎಂದು ಆರೋಪಿಸಿದರು.