Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ವಾಲ್ಮೀಕಿ ಅಭಿವೃಧ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಮುಖ್ಯ ಆರೋಪಿ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ. ಚಾರ್ಚ್‌ಶೀಟ್‌ನಲ್ಲಿ ವರದಿ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದರಲ್ಲಿ ಹಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪ್ರಕರಣದ ಬಗ್ಗೆ ಇ.ಡಿ.ಯೂ ತನಿಖೆ ನಡೆಸಿದ್ದು, ಸುಮಾರು 187 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ.

ಅಲ್ಲದೇ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿಯಾಗಿದ್ದು, ಹೈದರಾಬಾದ್‌ ಫಸ್ಟ್‌ ಕ್ರೆಡಿಟ್‌ ಕೋ ಆಪರೇಟಿವ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್‌, ಬ್ಯಾಂಕ್‌ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಜೆ.ಜೆ.ಪದ್ಮನಾಭ, ಸಹಚರರರಾದ ನಾಗೇಶ್ವರ ರಾವ್‌, ನೆಕ್ಕುಂಟಿ ನಾಗರಾಜ್‌ ಮತ್ತು ವಿಜಯ್‌ ಕುಮಾರ್‌ ಗೌಡ ಸೇರಿದಂತೆ 24 ಆರೋಪಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ನಾಗೇಂದ್ರ ಅವರ ಮೊಬೈಲ್‌ ಹಾಗೂ ಆವರ ಆಪ್ತ ವಿಜಯ್‌ ಕುಮಾರ್‌ ಅವರ ಮೊಬೈಲ್‌ನ್ನು ವಶಕ್ಕೆ ಪಡೆದು ರಿಟ್ರೀವ್‌ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಅವ್ಯವಹಾರ ಹಣ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ.

ಅಲ್ಲದೇ, ಬಳ್ಳಾರಿ ಲೋಕಸಭಾ ಚುನಾವಣೆಗಾಗಿ 20.19 ಕೋಟಿ ರೂ. ವೆಚ್ಚ ಮಾಡಿದ್ದರೂ ಸಹ ನಾಗೇಂದ್ರ ಅವರು, ವೈಯಕ್ತಿಕ ಖರ್ಚಿಗೆ ಹಣವನ್ನು ದುರ್ಬಳಕೆ ಮಾಡಿದ್ದಾರೆ.

ಆರೋಪಿ ನಾಗೇಂದ್ರ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಬೆಳಕಿಗೆ ಬರುತ್ತಿದ್ದಂತೆ ಮೊಬೈಲ್‌ ನಾಶ ಪಡಿಸುವ ಕಾರ್ಯ ನಡೆದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸತ್ಯ ಬಾಯಿಬಿಡದಂತೆ ಬೆದರಿಕೆ ಹಾಕಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags: