ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ. ಚಾರ್ಚ್‌ಶೀಟ್‌ನಲ್ಲಿ ವರದಿ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದರಲ್ಲಿ ಹಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪ್ರಕರಣದ ಬಗ್ಗೆ ಇ.ಡಿ.ಯೂ ತನಿಖೆ ನಡೆಸಿದ್ದು, ಸುಮಾರು 187 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ.
ಅಲ್ಲದೇ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿಯಾಗಿದ್ದು, ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಜೆ.ಜೆ.ಪದ್ಮನಾಭ, ಸಹಚರರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ ಸೇರಿದಂತೆ 24 ಆರೋಪಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿ ನಾಗೇಂದ್ರ ಅವರ ಮೊಬೈಲ್ ಹಾಗೂ ಆವರ ಆಪ್ತ ವಿಜಯ್ ಕುಮಾರ್ ಅವರ ಮೊಬೈಲ್‌ನ್ನು ವಶಕ್ಕೆ ಪಡೆದು ರಿಟ್ರೀವ್ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಅವ್ಯವಹಾರ ಹಣ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ.
ಅಲ್ಲದೇ, ಬಳ್ಳಾರಿ ಲೋಕಸಭಾ ಚುನಾವಣೆಗಾಗಿ 20.19 ಕೋಟಿ ರೂ. ವೆಚ್ಚ ಮಾಡಿದ್ದರೂ ಸಹ ನಾಗೇಂದ್ರ ಅವರು, ವೈಯಕ್ತಿಕ ಖರ್ಚಿಗೆ ಹಣವನ್ನು ದುರ್ಬಳಕೆ ಮಾಡಿದ್ದಾರೆ.
ಆರೋಪಿ ನಾಗೇಂದ್ರ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಬೆಳಕಿಗೆ ಬರುತ್ತಿದ್ದಂತೆ ಮೊಬೈಲ್ ನಾಶ ಪಡಿಸುವ ಕಾರ್ಯ ನಡೆದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸತ್ಯ ಬಾಯಿಬಿಡದಂತೆ ಬೆದರಿಕೆ ಹಾಕಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…