ಕೋಲಾರ : ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಒಂದು ವಿಕೆಟ್ ಬಿದ್ದಿದೆ. ಒಂದು ವಿಕೆಟ್ ಮಾತ್ರವಲ್ಲ ಇನ್ನೂ ಮೂರರಿಂದ ನಾಲ್ಕು ವಿಕೆಟ್ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಈಗಾಗಲೇ ಹಲವರನ್ನು ಬಂಧಿಸಿ ಕೆಲವೊಂದು ಮಾಹಿತಿ ಕಲೆಹಾಕುತ್ತಿದೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಕೂಡ ರಾಜೀನಾಮೆ ನೀಡಿದ್ದಾರೆ. ಇನ್ನು ಈ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಕೋಲಾರದಲ್ಲೂ ಕೂಡ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ವೇಳೆ ಮಾತನಾಡಿದ ಆರ್.ಅಶೋಕ್ , ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ಆಗಿದೆ. ಅದರಲ್ಲಿ ನಾಗೇಂದ್ರ ಪಾಲು 20 ಪರ್ಸೆಂಟ್ ಆದರೆ 80 ಪರ್ಸೆಂಟ್ ಲೂಟಿ ಮಾಡಿರೋದು ಸಿದ್ದರಾಮಯ್ಯ ಹಾಗೂ ಅವರ ಗ್ಯಾಂಗ್, ಅದಕ್ಕೆ ಸಿದ್ದರಾಮಯ್ಯನವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಒಂದು ವಿಕೆಟ್ ಬಿದ್ದಿರೋದಲ್ಲ ಇನ್ನು ಮೂರು ನಾಲ್ಕು ವಿಕೆಟ್ ಬೀಳೋದಿದೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ಅಲ್ಲದೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದೊಂದು ಲೂಟಿ ಸರ್ಕಾರ ಎಂದು ಜನಕ್ಕೆ ಈಗಾಗಲೇ ಅರ್ಥವಾಗಿದೆ. 2000 ರೂಪಾಯಿ ಹೆಸರಲ್ಲಿ ಜನರನ್ನು ಲೂಟಿ ಮಾಡಿದ್ದಾರೆ, ರಾಜ್ಯದಲ್ಲಿ ಡೆಂಗ್ಯೂ ಜ್ವರ ತಾಂಡವಾಡುತ್ತಿದೆ, ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಕುಡಿಯೋ ನೀರು ಕೊಡಲು ಇವರ ಬಳಿ ಹಣ ಇಲ್ಲ. ರಾಜ್ಯದಲ್ಲಿ ಸರ್ಕಾರ ಪಾಪರ್ ಆಗಿದೆ ಎಂದು ಕಿಡಿಕಾರಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…