Mysore
24
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿಯಿಂದ ಮತ್ತೊಂದು ಹೋರಾಟ

ಬೆಂಗಳೂರು: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಬಳ್ಳಾರಿ ಪದಯಾತ್ರೆ ನಡೆಸಲು ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನಾವು ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಈ ಬಗ್ಗೆ ಹೈಕಮಾಂಡ್‌ ನಮಗೆ ಸಲಹೆ ನೀಡಿದೆ. ವಾಲ್ಮೀಕಿ ಹಗರಣದಲ್ಲಿ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದರು.

ಪಾದಯಾತ್ರೆ ನಡೆಸುವ ದಿನಾಂಕವನ್ನು ಬಿಜೆಪಿ ನಾಯಕರು ಕೂತು ಚರ್ಚೆ ಮಾಡುತ್ತೇವೆ. ಎಲ್ಲಾ ನಾಯಕರು ಇದರಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದರು.

ಎಲ್ಲಿಂದ ಪಾದಯಾತ್ರೆ ಶುರುವಾಗುತ್ತದೆ ಎಂಬುದನ್ನು ಕೂಡ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ರಾಜ್ಯ ಸರ್ಕಾರ ಹಗರಣಗಳಿಂದ ತುಂಬಿ ತುಳುಕಿದೆ. ಹಾಗಾಗಿ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

 

Tags:
error: Content is protected !!