ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ.
ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸ್ವತಃ ಸಿಎಂ ಅವರೇ ಹಗರಣದ ಬಗ್ಗೆ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಲೇಬೇಕು ಎಂದು ಒತ್ತಾಯಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದು ಅಂದ್ರೆ ಕೂಡಲೇ 187 ಕೋಟಿ ರೂ ವಾಪಸ್ ಪಡೆಯಬೇಕು. ಪ್ರಕರಣ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.