Mysore
24
overcast clouds

Social Media

ಮಂಗಳವಾರ, 26 ಮೇ 2026
Light
Dark

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್:‌ 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

valmeeki (1)

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ನೆಕ್ಕುಂಟಿ ನಾಗರಾಜ್‌, ಚಂದ್ರಮೋಹನ್‌, ಗೋಲಪಲ್ಲಿ ಕಿಶೋರ್‌ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 4.45 ಕೋಟಿ ರೂ ಮೌಲ್ಯದ ಭೂಮಿ, ಫ್ಲಾಟ್ಸ್‌ ಹಾಗೂ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿದ್ದ 50 ಲಕ್ಷ ರೂ ನಗದು ಜಪ್ತಿ ಮಾಡಲಾಗಿತ್ತು.

ವಾಲ್ಮೀಕಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಹಿನ್ನೆಲೆ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು, ನಿಮಗದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿತ್ತು. ದಾಖಲೆಗಳನ್ನು ನಕಲಿ ಮಾಡುವ ಮೂಲಕ ನಿಗಮಕ್ಕೆ 89.63 ಕೋಟಿ ರೂ ವಂಚಿಸಲಾಗಿತ್ತು.

Tags:
error: Content is protected !!