Mysore
25
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ಬಳಿಕ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಆಸ್ಪತ್ರೆಗೆ ಶಾಸಕ ಬಸನಗೌಡ ದದ್ದಲ, ಶಿವರಾಜ್‌ ಪಾಟೀಲ್‌, ಮಾಜಿ ಸಂಸದ ಬಿ.ವಿ.ನಾಯಕ್‌ ಭೇಟಿ ನೀಡಿದ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ.

Tags:
error: Content is protected !!