Mysore
29
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ದದ್ದಲ್‌ ಮನೆ ಮೇಳೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.

ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ದದ್ದಲ್‌ ಮನೆಯ ಮೇಳೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದೆ. ಮಾಜಿ ಸಚಿವ ನಾಗೇಂದ್ರ ಅವರ ಬೆಂಗಳೂರಿನ ಸದಾಶಿವನಗರ್‌ ಮನೆ,ಯಲಹಂಕದಲ್ಲಿರುವ ದದ್ದಲ್‌ ಮನೆ ಹಾಗೂ ವಾಲ್ಮೀಕಿ ನಿಗಮದ ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಭದ್ರತೆಯೊಂದಿಗೆ ಕಾರ್ಯಚರಣೆ ನಡೆಸುತ್ತಿದ್ದು, ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜು, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags: