ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದೆ.
ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದರು.
ಬಂಧಿತ ಹರೀಶ್ ಅಕ್ರಮದ ವೇಳೆ ಅಧಿಕಾರಗಳಿಗೆ ಮೌಖಿಕ ಸೂಚನೆ ನೀಡಿದ್ದನು. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾನೆ. ಜೊತೆಗೆ ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಹೀಗಾಗಿ ಸಚಿವ ನಾಗೇಂದ್ರ ಪರವಾಗಿ ಅಕ್ರಮ ಹಣದ ವಹವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.