Categories: ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಬಿ.ನಾಗೇಂದ್ರ ಪಿಎ ಬಂಧನ

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದೆ.

ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದರು.

ಬಂಧಿತ ಹರೀಶ್‌ ಅಕ್ರಮದ ವೇಳೆ ಅಧಿಕಾರಗಳಿಗೆ ಮೌಖಿಕ ಸೂಚನೆ ನೀಡಿದ್ದನು. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾನೆ. ಜೊತೆಗೆ ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಹೀಗಾಗಿ ಸಚಿವ ನಾಗೇಂದ್ರ ಪರವಾಗಿ ಅಕ್ರಮ ಹಣದ ವಹವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

11 mins ago

ಶಾಸಕ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್:‌ ಜಾಮೀನು ಮಂಜೂರು

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು…

21 mins ago

ತಮಿಳುನಾಡು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಡಿಎಂಕೆಗೆ ಸೇರ್ಪಡೆ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್…

54 mins ago

ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾಗೆ ಬಿಗ್‌ ರಿಲೀಫ್

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ…

1 hour ago

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ…

1 hour ago

ಹುಣಸೂರು: ತಾಲ್ಲೂಕು ಕಚೇರಿ ಹಿಂಭಾಗದಲ್ಲಿ ಹೊತ್ತಿ ಉರಿದ ಗಿಡಮರಗಳು !

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ…

1 hour ago