Mysore
21
scattered clouds
Light
Dark

ವಾಲ್ಮೀಕಿ ನಿಗಮ ಹಗರಣ: ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಸಚಿವ ನಾಗೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಬಂಧನವಾಗಿ 45 ದಿನಗಳ ಕಳೆದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇದೇ ಆಗಸ್ಟ್.‌5 ರಂದು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು.

ಈ ಹಿಂದೆ ಹೈಗ್ರೌಂಡ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್‌ ಅವರ ಹೆಸರನ್ನು ಕೈಬಿಡಲಾಗಿತ್ತು.

ತನಿಖೆ ವೇಳೆ ಸುಮಾರು 45 ಕೋಟಿ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದರು.

ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರು ಇಂದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ಜಾಮೀನು ನೀಡುತ್ತಾ ಎಂದು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.