ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಕಳೆದ ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಇದೀಗ ಸಿಬಿಐ ಅಧಿಕಾರಿಗಳು ಜಾಮೀನು ರದ್ದತಿ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ಇಂದು ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.





