Mysore
19
overcast clouds
Light
Dark

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ