ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.
ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.
ಈ ಸ್ಲೀಪರ್ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.
ವಂದೇ ಭಾರತ್ ಸ್ಲೀಪರ್ ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…