"There has been malpractice in the voter list across the entire nation
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗುತ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲಾ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದು ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…