Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ರಾಜ್ಯದೆಲ್ಲೆಡೆ ತಗ್ಗಿದ ವರುಣ: ಶೀತ ಗಾಳಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ ಗಾಳಿ ಆರಂಭವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್‌, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಗದಗ, ಕೋಲಾರ, ಕೊಡಗು, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ರಾಯಚೂರು ಜಿಲ್ಲೆಯ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Tags:
error: Content is protected !!