Rain Intensifies; Red Alert Issued
ಮೈಸೂರು : ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಮೈಸೂರು ಮತ್ತು ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ:-ದರ್ಶನ್‌ಗೆ ಸಿಗದ ಅಗತ್ಯ ಸೌಲಭ್ಯ : ಜೈಲು ಪರಿಶೀಲಿಸಿದ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಕೋರ್ಟ್ ಸೂಚನೆ
ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ ಎಂದು ಇಲಾಖೆ ತಿಳಿಸಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…