Mysore
24
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

MES ಸಂಘಟನೆ ನಿಷೇಧಿಸುವಂತೆ ವಾಟಾಳ್‌ ಆಗ್ರಹ

ಬೆಳಗಾವಿ: ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್‌ ಮಹದೇವಪ್ಪನ ಮೇಲೆ ಹಲ್ಲೆ ನಡೆಸಿದ MES ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್‌ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದಾರೆ. ಫಿಲಂ ಛೇಂಬರ್‌ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದ್‌, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ ಸಾಥ್‌ ನೀಡಿದ್ದಾರೆ.

ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿರುವ MES ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯ ಸ್ಥಳದಲ್ಲಿ ಏನು ಆಗದಂತೆ ತಡೆಯಲು ಮೂವರು ಎಸಿಪಿ ಸೇರಿ ಸುಮಾರು 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿಲಾಗಿದೆ.

Tags:
error: Content is protected !!