Mysore
26
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

accident (1)

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ ತಾಲ್ಲೂಕಿನ ಜಾಲಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಇದನ್ನು ಓದಿ: ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲ್ಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!