ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡದ ಹಿರಿಯ ಹಾಗೂ ಬಹುಭಾಷ ನಟಿ ಲೀಲಾವತಿ ಅವರು ನಿನ್ನೆ ವಯೋಸಹಜವಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇವಲ ಚಿತ್ರರಂಗ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರ ಗಣ್ಯಾಥಿಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಕನ್ನಡದಲ್ಲೇ ಬರೆಯುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ʼಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನ ವಾರ್ತೆ ಕೇಳಿ ಅತೀವ ದುಖಃವಾಗಿದೆ. ಸಿನಿಮಾದ ನೈಜ ಪ್ರತೀಕವಾದ ಅವರು ಅನೇಕ ಚಿತ್ರಗಳಲ್ಲಿ ತಮ್ಮ ಬಹುಮುಖ ಪ್ರತಿಭೆಯೊಂದಿಗೆ ಬೆಳ್ಳೆ ತೆರೆಯನ್ನು ಅಲಂಕರಿಸಿದವರು.ಅವರ ವೈವಿಧ್ಯಮಯ ಪಾತ್ರಗಳನ್ನು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿʼ ಎಂದು ಬರೆಯುವ ಮೂಲಕ ಸಂತಾಪ ಸೂಚಿಸಿದ್ದಾರೆ.