ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲಂ ಚೇಂಬರ್)ನಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಜೋ ಸೈಮನ್ ಅವರು 1970ರ ದಶಕದಿಂದ ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಿರ್ದೇಶಕ, ನಟ ಮತ್ತು ಗೀತರಚನೆಕಾರರಾಗಿ ಕೊಡುಗೆ ನೀಡಿದ್ದಾರೆ. ಅವರ ನಿರ್ದೇಶನದಲ್ಲಿ ಬಂದ ‘ಸಾಹಸ ಸಿಂಹ’, ‘ಸಿಂಹ ಜೋಡಿ’, ‘ಹಾಂಕಾಂಗ್‌ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ಟೈಂ ಬಾಂಬ್’ ಸೇರಿದಂತೆ ಹಲವು ಆಕ್ಷನ್, ಥ್ರಿಲ್ಲರ್ ಮತ್ತು ಪ್ರೇಮಕಥಾ ಚಿತ್ರಗಳು ಪ್ರೇಕ್ಷಕರ ಮನಸ್ಸನ್ನು ಗೆದ್ದವು.
ಸಭೆಯಲ್ಲಿ ಭಾಗವಹಿಸುತ್ತಿದ್ದಾಗಲೇ ಅಸ್ವಸ್ಥರಾದ ಅವರನ್ನು ಸಹೋದ್ಯೋಗಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ಆರೋಗ್ಯ ಸ್ಥಿತಿ ತೀವ್ರವಾಗಿದ್ದರಿಂದ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಜೋ ಸೈಮನ್ ಅವರು ಸಿನಿಮಾ ಕ್ಷೇತ್ರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಹಿರಿಯ ತಲೆಮಾರಿನೊಂದಿಗೆ ನಿಕಟ ಸಂಬಂಧ ಹೊಂದಿದ್ದ ಅವರ ಅಗಲಿಕೆಯಿಂದ ಸ್ಯಾಂಡಲ್‌ವುಡ್ ಶೋಕಸಾಗರದಲ್ಲಿ ಮುಳುಗಿದೆ.
ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…
ರಮೇಶ್ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…
ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…