Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು: ಖ್ಯಾತ ನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರಿಂದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ, ನಿರ್ದೇಶಿಸಿ ಅತ್ಯಂತ ಜನಪ್ರಿಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್‌ ದಿ ಬೆಸ್ಟ್‌ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರ ವಹಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!