ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.
ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಬಳಿಕ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು ಬೆಳಗಿನ ಉಪಹಾರ ಸೇವಿಸಿ ಖುಷಿಪಟ್ಟರು. ಈ ವೇಳೆ ಜಗದೀಪ್ ಧನಕರ್ ಅವರ ಪತ್ನಿ ಸುದೇಶ್ ಧನಕರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಹ ಹಾಜರಿದ್ದರು.