ರಾಜ್ಯ

ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧ 2 ಕೋಟಿ ಆಮಿಷದ ದೂರು ದಾಖಲಿಸಿದ ಸಂತ್ರಸ್ತ

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ.

ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ ಆಪ್ತ ಶಿವಕುಮಾರ್‌ ಬಳಿ ಹೇಳಿದ್ದೆ. ಆತ ನನ್ನನ್ನು ಕೂಡಿಹಾಕಿ 2 ಕೋಟಿ ರೂ. ಆಮಿಷ ಹಾಗೂ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದ್ದೆ ಆದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಸಹಾ ಹಾಕಿದ್ದ ಎಂದು ಸಂತ್ರಸ್ತ ಶಿವಕುಮಾರ್‌ ವಿರುದ್ಧ ದೂರು ದಾಖಲಿಸಿದ್ದಾನೆ.

ಸಂತ್ರಸ್ತ ನೀಡಿದ ದೂರನಿಲ್ಲೇನಿದೆ?: ಸೂರಜ್‌ ರೇವಣ್ಣರಿಂದ ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು, ನನ್ನನ್ನು ಆಸ್ಪತ್ರೆಗೆ ಬಿಡದೇ ಕೊಠಡಯೊಂದರಲ್ಲಿ ಶಿವಕುಮಾರ್‌ ಕೂಡಿ ಹಾಕಿದ್ದನು. ನನ್ನ ಬಳಿಯಿಂದಲೇ 1000 ರೂ. ಹಣಪಡೆದು ಊಟ ಕೊಡಿಸಿ ಬಳಿಕ ಸೂರಜ್‌ ರೇವಣ್ಣ ಜತೆ ಮಾತನಾಡಿಸಿದರು. ಅವರು ನನಗೆ 2 ಕೋಟಿ ಹಣ ಹಾಗೂ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು. ಆದರೆ ನಾನು ಒಪ್ಪದಿದ್ದಾಗ ನಿನ್ನನ್ನು ಮುಗಿಸುವೇ ಎಂದು ಗದರಿಸಿದ್ದರು ಎಂದು ಹೇಳಿದರು

ನನ್ನನ್ನು ಮನೆಗೆ ಕಳುಹಿಸದೇ ಲಾಡ್ಜ್‌ನಲ್ಲಿ ಕೂಡಿಹಾಕಿದ್ದ ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಅಳಲು ತೋಡಿಕೊಂಡಿದ್ದಾನೆ.

ಆಂದೋಲನ ಡೆಸ್ಕ್

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

41 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

50 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago